ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆಯಿಂದ ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಅವರು ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ, ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಉದ್ಘಾಟನೆ, ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಮತ್ತು ಚಾಮುಂಡಿ ಬೆಟ್ಟ ಹಾಗೂ ಸುತ್ತೂರು ಮಠಕ್ಕೆ ಭೇಟಿ ನೀಡುವುದು ಅವರ ಭೇಟಿಯ ಪ್ರಮುಖ ಕಾರ್ಯಕ್ರಮಗಳಲ್ಲಿ ಸೇರಿವೆ.
ಜೂನ್ 20 ರಂದು ಬೆಳಗ್ಗೆ 11.55ಕ್ಕೆ ಪ್ರಧಾನಮಂತ್ರಿ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದು, ಅಲ್ಲಿಂದ ಅವರು ವಾಯುಪಡೆ ಕಮಾಂಡ್‌ಗೆ ತೆರಳಲಿದ್ದಾರೆ. ನಂತರ ಭಾರತೀಯ ವಿಜ್ಞಾನ ಸಂಸ್ಥೆಗೆ ತೆರಳಿ ಅಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾರತೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ ನಂತರ, ಪ್ರಧಾನಿ ಅವರು ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ಮತ್ತು ರೈಲ್ವೆ, ರಸ್ತೆ ಯೋಜನೆಗಳು ಹಾಗೂ ಬಹು ಮಾದರಿ ಲಾಜಿಸ್ಟಿಕ್ ಪಾರ್ಕ್‌ಗಳ ಶಂಕುಸ್ಥಾಪನೆಗಾಗಿ ಕೊಮ್ಮಘಟ್ಟಕ್ಕೆ ತೆರಳಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ