ಕಾರ್ಕಳ : ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪ ನಿನ್ನೆ ಸಂಜೆ ನಡೆದ ಭೀಕರ ಅಪಘಾತದಲ್ಲಿ ಜೀಪು ಪಲ್ಟಿಯಾಗಿ ಯುವತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಕಿನ್ನಿಗೋಳಿಯಿಂದ ಮುಂಡ್ಕೂರು ಕಡೆಗೆ ತೆರಳುತ್ತಿದ್ದ ಜೀಪಿನಲ್ಲಿ ಚಾಲಕನ ಸಹಿತ ಆರು ಮಂದಿ ಪ್ರಯಾಣಿಸುತ್ತಿದ್ದು ಮೂವರು ಗಂಭೀರ ಗಾಯಗೊಂಡಿದ್ದರೆ ಇನ್ನುಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆ ದೊಯ್ಯಲಾಗಿದೆ. ಕುಳಾಯಿಯಿಂದ ಖಾಸಗಿ ಕಾರ್ಯಕ್ರಮ ಮುಗಿಸಿ ವಾಪಾಸು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿತು. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಅಗತ್ತ ಕ್ರಮ ಕೈಗೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ