ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಛೇರಿಯಲ್ಲಿದ್ದ 20,000 ರೂ. ಮೌಲ್ಯದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳ್ಳತನ ಮಾಡಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳರು ಧ್ವಜಸ್ತಂಭದ ಮೇಲೇರಿ ದೇಗುಲದ ಒಳಗೆ ಪ್ರವೇಶಿಸಿದ್ದು, ಹೊರ ಹೋಗುವಾಗ ಪಶ್ಚಿವiದ ಮುಖ್ಯದ್ವಾರ ತೆಗೆದುಕೊಂಡು ಹೋಗಿದ್ದಾರೆ. ಶ್ರೀ ಗಣಪತಿ ದೇವರ ಗುಡಿಯ ಒಳಗೆ ಪ್ರವೇಶಿಸಿದ ಕಳ್ಳರು ಗಣಪತಿಯ ಶಿಲಾಮೂರ್ತಿಯ ಮುಖವಾಡಕ್ಕೆ ಇಡಲಾದ ಪಂಚಲೋಹದ ತಗಡು ಹಾಗೂ ಪಾಣಿಪೀಠದ ಕವಚಗಳನ್ನು ತೆಗೆದು ಅಲ್ಲೇ ಬಿಟ್ಟು ಹೋಗಿದ್ದಾರೆ. ದ್ವಾರದಲ್ಲಿದ್ದ ಎರಡು ಲಾಕರ್ ಕಾಣಿಕೆ ಡಬ್ಬಿಯನ್ನು ಒಡೆಯಲು ಯತ್ನಿಸಿದ್ದು ಕಂಡು ಬಂದಿದೆ. ದೇಗುಲದ ಕಛೇರಿಯ ಬೀರುವನ್ನು ಮುರಿದು ಜಾಲಾಡಿದ್ದಾರೆ. ಇನ್ನು ಅಲ್ಲಿಂದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳವುಗೈದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ