ವಿಧಾನ ಪರಿಷತ್ ಚುನಾವಣೆ ವೇಳೆ ಅಡ್ಡ ಮತದಾನದ ಬೆನ್ನಲ್ಲೇ ಮಹಾರಾಷ್ಟ್ರ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾಗಿದ್ದು, ಶಿವಸೇನಾ ಮುಖಂಡ, ಸಚಿವ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದಾರೆ.
ಸುಮಾರು 15-20 ಶಾಸಕರೊಂದಿಗೆ ಸಚಿವ ಏಕನಾಥ್ ಶಿಂಧೆ ಗುಜರಾತ್ ನ ಸೂರತ್ ರೆಸಾರ್ಟ್ ಗೆ ತೆರಳಿದ್ದು, ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಸಿಡಿದೆದ್ದಿದ್ದಾರೆ.
ಶಾಸಕರಾದ ಪ್ರಕಾಶ್ ಸುರ್ವೆ, ಮಹೇಶ್ ಶಿಂಧೆ, ಧ್ಯಾನೇಶ್ವರ್ ಚೌಗುಲೆ, ಶಂಭುರಾಜ್ ದೇಸಾಯಿ, ಅಬ್ದುಲ್ ಸತ್ತಾರ್, ಚಂದ್ರಕಾಂತ್ ಪಾಟೀಲ್ ಸೇರಿದಂತೆ ಹಲವು ಶಾಸಕರು ಸಚಿವರೊಂದಿಗೆ ಸೂರತ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದು, ಸಭೆ ನಡೆಸಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಸಚಿವ ಏಕನಾಥ್ ಶಿಂಧೆಯೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ. ಅಲ್ಲದೇ ಮಹಾ ಸರ್ಕಾರದಲ್ಲಿನ ಬೆಳವಣಿಗೆಗಳ ಬಗ್ಗೆ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ