Slider


ʼಅಗ್ನಿಪಥ್ʼ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ:-ಅಜಿತ್ ದೋವಲ್ ಹೇಳಿಕೆ 21-6-2022

 


ʼಅಗ್ನಿಪಥ್ʼ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯ ರಕ್ಷಣಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್‌ ತಿಳಿಸಿದ್ದಾರೆ.

ಭಾರತವು ವಿಶ್ವದಲ್ಲೇ ಹೆಚ್ಚಿನ ಸಂಖ್ಯೆಯ ಯುವಸಮುದಾಯವನ್ನು ಹೊಂದಿದೆ. ಹೀಗಾಗಿ ಹೆಚ್ಚಿನ ಸರಾಸರಿ ವಯಸ್ಸಿನವರನ್ನು ಸೈನ್ಯದಲ್ಲಿ ಹೊಂದಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.



ಕೃಷಿ ಕಾಯ್ದೆಗಳಂತೆಯೇ ಇದಕ್ಕೂ ಮಂಡಿಯೂರಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಯೋಜನೆಯು ದಶಕಗಳಿಂದ ಚರ್ಚೆಯಲ್ಲಿದೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ಒಂದು ಹೆಜ್ಜೆ ಮುಂದೆ ಹೋಗಿ ರಾಜಕೀಯವಾಗಿ ರಿಸ್ಕ್‌ ತೆಗೆದುಕೊಳ್ಳುತ್ತೇನೆಂದು ಪ್ರಧಾನಿ ನರೇಂದ್ರ ಮೋದಿಯಂತಹ ನಾಯಕರು ಮಾತ್ರ ಹೇಳಬಲ್ಲರು ಎಂದು ಅಭಿಪ್ರಾಯಪಟ್ಟಿದ್ದಾರೆ. 

ಪ್ರತಿಭಟನೆ ಹಾಗೂ ಹಿಂಸಾಚಾರ ಕುರಿತು ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳು ಈ ರೀತಿ ಮಾಡುವುದಿಲ್ಲ. ನಿಜವಾದ ಆಕಾಂಕ್ಷಿಗಳು ಮನೆಯಲ್ಲಿದ್ದು, ತಯಾರಿ ನಡೆಸುತ್ತಿದ್ದಾರೆ. ಸರ್ಕಾರವನ್ನು ಅಪಖ್ಯಾತಿಗೊಳಿಸಲು ಸಮಾಜದಲ್ಲಿ ಸಂಘರ್ಷವನ್ನು ಬಯಸುವ ಜನರಿದ್ದಾರೆ ಎಂದು ಟೀಕಿಸಿದ್ದಾರೆ. 

ಕೇಂದ್ರ ಸರ್ಕಾರ ಘೋಷಿಸಿರುವ ʼಅಗ್ನಿಪಥ್ʼ ಯೋಜನೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಕೂಡಲೇ ಯೋಜನೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಯೋಜನೆಯಲ್ಲಿ ಅಗತ್ಯ ಮಾರ್ಪಾಡಿಗೆ ಕೇಂದ್ರ ಸರ್ಕಾರ ಮುಂದಾಗಿದೆ





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo