ರಾಜ್ಯದಲ್ಲಿ ಮುಂಗಾರು ನಿಧಾನವಾಗಿ ಚುರುಕುಗೊಳ್ಳುತ್ತಿದೆ. ಕರಾವಳಿ, ಮಲೆನಾಡಿನ ಭಾಗದಲ್ಲಿ ಮಳೆಯಾಗುತ್ತಿದೆ.
ಇಂದಿನಿಂದ 3ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದ್ದು, ಜೂನ್ 15ರ ಬಳಿಕ ಮಳೆ ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು ವಾರಾಂತ್ಯ ಮಳೆ ಆರಂಭವಾಗಲಿದೆ ಎಂದು ಇಲಾಖೆ ತಿಳಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ