Slider

ಇನ್ಮುಂದೆ ಗೃಹ ಬಳಕೆಯ ಎಲ್.ಪಿ.ಜಿ. ಸಿಲಿಂಡರ್‌ಗೆ ಸಬ್ಸಿಡಿ ಸಿಗಲ್ಲ3-6-2022

 


ನವದೆಹಲಿ: ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ.



ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.



ಸದ್ಯ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್ ಬೆಲೆ 1006 ರೂಪಾಯಿ ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿ ಸಿಗಲಿದೆ.



ಈ ಮೊದಲು ಹೇಗಿತ್ತು?

ಈ ಮೊದಲು ಸಬ್ಸಿಡಿ ಸಹಿತವಾಗಿಯೇ ಸಿಗುತಿತ್ತು. ಗೃಹ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್‌ ದುರುಪಯೋಗ ಆಗುತ್ತಿರುವ ವಿಚಾರ ತಿಳಿದು ಮೋದಿ ಸರ್ಕಾರ ಸಿಲಿಂಡರ್‌ ಖರೀದಿ ಮಾಡಿದ ಬಳಿಕ ಬ್ಯಾಂಕ್‌ ಖಾತೆಗೆ ಸಬ್ಸಿಡಿ ದುಡ್ಡನ್ನು ಹಾಕುತ್ತಿತ್ತು. ಆದರೆ ಕೋವಿಡ್‌ ಬಳಿಕ ಸಬ್ಸಿಡಿ ಮೊತ್ತ ಹಾಕುವುದನ್ನು ಸ್ಥಗಿತಗೊಳಿಸಿದೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo