ಉಡುಪಿ: ಉಡುಪಿ ಜಿಲ್ಲೆಯಲ್ಲಿ ತಲವಾರು ಹಿಡಿದು ಬರ್ತ್ ಡೇ ಆಚರಣೆ ಹಿನ್ನೆಲೆ ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬರ್ತಡೇ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಸ್ಪಿ ಆದೇಶದಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಪೋಲಿಸರ ವಶಕ್ಕೆ ಪಡೆಯಲಾಗಿದೆ. ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ತಲೆ ಮರೆಸಿಕೊಂಡಿದ್ದು, ಇವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ ಐ ಪುರುಷೋತ್ತಮ್ ತಂಡ ರಚಿಸಲಾಗಿದೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಆದೇಶದಂತೆ ಕಾರ್ಯಚರಣೆ ನೆಡೆಯುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ