ಆರೆಸೆಸ್ಸ್ ಚಡ್ಡಿ ಸುಡಿ ಅಭಿಯಾನಕ್ಕೆ ಕರೆ ಕೊಟ್ಟಿರುವ ಸಿದ್ದರಾಮಯ್ಯಗೆ ಆರೆಸ್ಸೆಸ್ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆರೆಸೆಸ್ಸ್ ಚಡ್ಡಿ ಸುಡಿ ಅಭಿಯಾನಕ್ಕೆ ಕರೆ ಕೊಟ್ಟಿರುವ ಸಿದ್ದರಾಮಯ್ಯಗೆ ಆರೆಸ್ಸೆಸ್ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆರೆಸೆಸ್ಸ್ ಚಡ್ಡಿ ಸಂಸ್ಕೃತಿ ಬಿಟ್ಟು ಪ್ಯಾಂಟಿಗೆ ಬಂದು ಬಹಳ ಸಮಯವಾಯಿತು. ಈಗ ನಮ್ಮ ಗಣವೇಶ ಅಂಗಿ ಪ್ಯಾಂಟ್ ಆಗಿದೆ. ಸಿದ್ದರಾಮಯ್ಯ ರಾಜಕೀಯ ಕಾರಣಕ್ಕೆ ಹೀಗೆ ಮಾತನಾಡುತ್ತಾರೆ. ಆ ಚಡ್ಡಿ ಇದ್ದದ್ದರಿಂದ ದೇಶದಲ್ಲಿ ಒಳ್ಳೆಯ ವಾತಾವರಣ ಇದೆ. ಆರೆಸೆಸ್ಸ್ ಇಲ್ಲದೇ ಇರುತ್ತಿದ್ದರೆ ದೇಶದ ಪರಿಸ್ಥಿತಿ ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ