ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಯುವಕನೊಬ್ಬನನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಇಂದು ರಾತ್ರಿ ಬೈಕಂಪಾಡಿ ಜಂಕ್ಷನ್ ಬಳಿ ಸಂಭವಿಸಿದೆ.
ಬೈಂಕಪಾಡಿ ನಿವಾಸಿ ರಾಜ ಬಂಗೇರ ಎಂಬವನ ಮೇಲೆ ತಲವಾರು ದಾಳಿ ನಡೆದಿದೆ.
ರಾಜ ಬಂಗೇರ ಎರಡು ಕೊಲೆ ಹಾಗೂ ಕೆಲವೊಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿಯಲಾಗಿದೆ. ಅದೇ ದ್ವೇಷದಿಂದ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಇಬ್ಬರು ಬೈಕಿನಲ್ಲಿ ಬಂದು ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ರಾಜನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ