ಬೆಂಗಳೂರು:-ಹಲವು ದೇಶಗಳಲ್ಲಿ ಈಗಾಗಲೇ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೇಂದ್ರ ಸರಕಾರದ ಸೂಚನೆಯ ಹಿನ್ನೆಲೆಯಲ್ಲಿ ಇದೀಗ ಕರ್ನಾಟಕದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.
ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಸಂದರ್ಭದಲ್ಲಿ ಸೊಂಕಿತನ ರಕ್ತ ಮಾದರಿಗಳನ್ನು ಸಂಗ್ರಹಿಸಿ ಪುಣೆಯಲ್ಲಿರುವ ನ್ಯಾಷನಲ್ ಇನ್ಷ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್‌ಗೆ ಕಳುಹಿಸಿಕೊಡಲು ಸೂಚಿಸಲಾಗಿದೆ. ಮತ್ತು ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ