ಬೆಂಗಳೂರು: 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ಇಂದಿನಿಂದ ಪ್ರಾರಂಭವಾಗಲಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಕೊರೊನಾ 3 ಅಲೆಗಳ ಬಳಿಕ ಎರಡು ವರ್ಷಗಳ ಕೊರೊನಾ ಆತಂಕದ ನಡುವೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿವೆ. ಕೊರೊನಾ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಿ, ಆನ್‍ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ ಪಿಯುಸಿ ಬೋರ್ಡ್ ಮಾರ್ಗಸೂಚಿ ಮತ್ತು ವೇಳಾಪಟ್ಟಿ ಪ್ರಕಟ ಮಾಡಿದೆ.
ಹಿಜಬ್ ಸಂಘರ್ಷದ ಹಿನ್ನೆಲೆಯಲ್ಲಿ ಈ ವರ್ಷ ಸರ್ಕಾರ ಎಚ್ಚೆತ್ತುಕೊಂಡಿದೆ. ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಅಂತ ಮಾರ್ಗಸೂಚಿಯಲ್ಲೆ ತಿಳಿಸಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಆದೇಶ ಹೊರಡಿಸಿದೆ.
ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು. ಒಂದು ವೇಳೆ ಸಮವಸ್ತ್ರ ನಿಯಮ ಇಲ್ಲದೆ ಹೋದರೆ ಧಾರ್ಮಿಕ ಭಾವನೆಗೆ ಧಕ್ಕೆ ಆಗದಂತಹ ವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹೈಕೋರ್ಟ್ ತೀರ್ಪಿನ ಅನ್ವಯ ಸಮವಸ್ತ್ರ ಧರಿಸುವಂತೆ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಉಲ್ಲೇಖ ಮಾಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ