ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನವಾಣಾ ಆಯುಕ್ತ, ಜುಲೈ 24ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರ ಅವಧಿ ಮುಗಿಯುತ್ತಿದ್ದು, ಜುಲೈ 25ರೊಳಗೆ ನೂತನ ರಾಷ್ರಪತಿ ಪ್ರಮಾಣವಚನ ಸ್ವೀಕರಿಸಬೇಕಿದೆ.ಜೂನ್ 15ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಎಂದರು.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ಜುಲೈ 25ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ