ಹೆಬ್ರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ ಸ್ಥಗಿತವಾಗಿದೆ.
ತಡರಾತ್ರಿ ಗುಡ್ಡ ಕುಸಿತದ ಪರಿಣಾಮ ರಾತ್ರಿಯಿಂದಲೇ ವಾಹನ ಸಂಚಾರ ಬಂದ್ ಆಗಿದ್ದು, ಶಿವಮೊಗ್ಗ ಆಗುಂಬೆಯಿಂದ ಉಡುಪಿಗೆ ಬರುವ ವಾಹನಗಳು ಸಿದ್ಧಾಪುರ ಮೂಲಕ ಬರುತ್ತಿದೆ.
ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುವ ಬಸ್ಸು ಸೇರಿದಂತೆ ವಾಹನಗಳು ಮಾಹಿತಿ ಇಲ್ಲದೆ ತೆರಳಿ ಮರಳಿ ವಾಪಸ್ಸಾಗಿರುವ ಘಟನೆ ಕಂಡು ಬಂತು.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ