ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ (ಜುಲೈ 26) ರಾತ್ರಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಇಬ್ಬರು ಆರೋಪಿಗಳನ್ನು ಆ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಝಾಕಿರ್ ಮತ್ತು ಶಫೀಕ್ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳನ್ನು ಗುರುವಾರ (ಜುಲೈ 28) ಸಂಜೆ ಪುತ್ತೂರಿನ ಪ್ರಧಾನ ಹಿರಿಯ ವ್ಯಾವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಂಧಿತ ಆರೋಪಿಗಳಿಬ್ಬರಿಗೂ ನ್ಯಾಯಾಧೀಶ ಗೌಡ ಆರ್.ಪಿ ಅವರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಅಗತ್ಯವಿದ್ದಲ್ಲಿ ಮತ್ತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕಿ ಕವಿತಾ ಅವರು ಮಾಹಿತಿ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ