ಉಡುಪಿ : ರಸ್ತೆ ಬದಿ ತೆರಳುತ್ತಿದ್ದ ಬೈಕ್‌ಗೆ ಏಕಾಏಕಿ ಕಾರು ಡಿಕ್ಕಿ ಹೊಡೆದ ಘಟನೆಗೆ ಸಂಬಂಧಿಸಿದಂತೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿಯ ಕರಾವಳಿ ಜಂಕ್ಷನ್ ಬಳಿ ನಡೆದಿದೆ.
ವಿಜಯಪುರ ನಿವಾಸಿ ಸುನಿಲ್(24) ಮೃತ ದುರ್ದೈವಿ. ಬ್ರಹ್ಮಾವರದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಕ್ಕದ ಸರ್ವೀಸ್ ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹಸವಾರ ಗಾಯಗೊಂಡಿದ್ದಾನೆ.
ಬಾಗಲಕೋಟೆ ನಿವಾಸಿ ಮಂಜುನಾಥ್ ಗಾಯಗೊಂಡ ಸಹಸವಾರ. ಈ ಬಗ್ಗೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ