ಕಾಪು : ತಾಲೂಕಿನ ಮೂಳೂರು ತೊಟ್ಟಂ ಪರಿಸರದ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ಎಲ್ಲೆಡೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಕರಾವಳಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ ಅಗತ್ಯವಾಗಿದ್ದು, ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಕೆಲವೇ ವರ್ಷಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣವಾಗಲಿದೆ. ಮೂಳೂರಿನ ಕಡಲ್ಕೊರೆತ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ತುರ್ತು ತಡೆಗೋಡೆ ನಿರ್ಮಿಸಲು ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಸಹಾಯಕ ಕಮಿಷನರ್ ರಾಜು, ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ ಮತ್ತಿತರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ