Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ : ಮುಂದಿನ ಎರಡು ದಿನಗಳ ಕಾಲ ಸಿ.ಎಂ ಬೊಮ್ಮಾಯಿ ಜಿಲ್ಲೆಯಲ್ಲಿ ಪ್ರವಾಸ 11.07.2022

 ಉಡುಪಿ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜುಲೈ 12 ಮತ್ತು 13ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.



ಜು.12 ರಂದು ರಾತ್ರಿ 8:30 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜು.13ರಂದು ಬೆಳಗ್ಗೆ 9:00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.



ಬಳಿಕ 10:30 ಕ್ಕೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ತೆರಳಿ ಅಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಮಳೆ ಹಾನಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸುವರು.



ಅಪರಾಹ್ನ 2:45 ಕ್ಕೆ ಭಟ್ಕಳದಿಂದ ರಸ್ತೆ ಮಾರ್ಗವಾಗಿ ಹೊರಟು, ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳ ಗಾದ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ. ಸಂಜೆ 6:30ಕ್ಕೆ ಉಡುಪಿಗೆ ಆಗಮಿಸುವ ಮುಖ್ಯಮಂತ್ರಿಗಳು, ಇಲ್ಲಿಂದ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುವರು.



ಮುಖ್ಯಮಂತ್ರಿಗಳೊಂದಿಗೆ ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರೂ ಪ್ರವಾಸದುದ್ದಕ್ಕೂ ಜೊತೆಗೂಡಲಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo