ಮಲ್ಪೆಯಿಂದ ಮೀನು ತುಂಬಿಸಿಕೊಂಡು ತೆರಳುತ್ತಿದ್ದ ಟೆಂಪೋ ಪಾಂಗಳ ಬಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಟೆಂಪೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸ್ಥಳೀಯ ಪೊಲೀಸರು ಆಗಮಿಸಿ ಟೆಂಪೋವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ