ಬ್ರಹ್ಮಾವರ: ಉಡುಪಿ ಜಿಲ್ಲೆಯ ಉಪ್ಪೂರಿನ ಕೆ.ಜಿ ರೋಡ್ ಸಮೀಪದ ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಕುವೈಟ್ ನ ನಿವಾಸಿಗಳಾದ ನಾರ್ಮನ್ ಹಾಗೂ ಸಿಲ್ವಿಯಾ ಲೀವಿಸ್ ದಂಪತಿಯ ಪುತ್ರ 5 ವರ್ಷದ ಲಾರೆನ್ ಲೀವಿಸ್ ಮೃತಪಟ್ಟ ಬಾಲಕ.
ಮನೆಯಲ್ಲಿ ಬಾಲಕ ಕಾಣಿಸದ ಹಿನ್ನೆಲೆಯಲ್ಲಿ ಮನೆ ಮಂದಿ ಎಲ್ಲಾ ಕಡೆ ಹುಡುಕಾಡಿದ್ದಾರೆ, ಆದರೆ, ಎಲ್ಲೂ ಬಾಲಕನ ಪತ್ತೆಯಾಗಿರಲಿಲ್ಲ. ಆದರೆ ಗುರುವಾರ ಬೆಳಿಗ್ಗೆ ಮನೆಯ ಹಿಂಬದಿ ಇರುವ ತೋಟದ ಸಮೀಪದ ನೀರಿನ ಹೊಂಡದಲ್ಲಿ ಬಾಲಕನ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ.
ರಜೆ ಹಿನ್ನಲೆಯಲ್ಲಿ ಹುಟ್ಟೂರಿಗೆ ಬಂದಿದ್ದ ಬಾಲಕ ಜು.4 ರಂದು ಹುಟ್ಟು ಹಬ್ಬ ಆಚರಿಸಿಕೊಂಡಿದ್ದ.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ