Slider


ಬೈಂದೂರು: ಬೈಕ್ ಅಪಘಾತ ಕಾಲೇಜು ವಿದ್ಯಾರ್ಥಿಗಳಿಬ್ಬರ ಮೃತ್ಯು17.07.2022

 ಕುಂದಾಪುರ : ಇಲ್ಲಿಗೆ ಸಮೀಪದ ಕಂಬದಕೋಣೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ.



ಮೃತರನ್ನು ಆಂಧ್ರಪ್ರದೇಶದ ಕಲ್ಲೂರು ತರುಣ್ ಕುಮಾರ್ ರೆಡ್ಡಿ(19) ಹಾಗೂ ಆದಿತ್ಯ ರೆಡ್ಡಿ(18) ಎಂದು ಗುರುತಿಸಲಾಗಿದೆ.


 





ಇವರು ಮಣಿಪಾಲದಿಂದ ಮುರ್ಡೇಶ್ವರಕ್ಕೆ ರೆಂಟ್ ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಮಧ್ಯೆ ಇದ್ದ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.




ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಇಬ್ಬರು ಗಾಯಗೊಂಡಿದ್ದು, ಇವರನ್ನು ಆಪತ್ಯಾಂಧವ ಇಬ್ರಾಹಿಂ ಗಂಗೊಳ್ಳಿ ಹಾಗೂ ಪ್ರದೀಪ್ ಖಾರ್ವಿ ಉಪ್ಪುಂದ, ಕೃಷ್ಣ, ನದೀಮ್ ಎರಡು ಅಂಬ್ಯುಲೆನ್ಸ್ಗಳಲ್ಲಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಗಂಭೀರವಾಗಿ ಗಾಯಗೊಂಡ ಇವರಿಬ್ಬರು ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.



ಸ್ಥಳಕ್ಕೆ ಬೈಂದೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo