ಹುಬ್ಬಳ್ಳಿ: ಕಾಂಗ್ರೆಸ್ ರಾಷ್ಟ್ರೀಯ ನಾಯಕ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆಗಸ್ಟ್ 2ರಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಲಿದ್ದು, ಆ ದಿನ ರಾತ್ರಿ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆಯಲಿರುವ ರಾಜಕೀಯ ವ್ಯವಹಾರ ಕುರಿತ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಈ ರಾಜಕೀಯ ವ್ಯವಹಾರ ಸಭೆ ಐತಿಹಾಸಿಕವಾದುದು. ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ರಾಹುಲ್ ಗಾಂಧಿ ಅವರು ಚಿತ್ರದುರ್ಗದ ಮುರುಘಾ ಮಠಕ್ಕೂ ಭೇಟಿ ನೀಡಲಿದ್ದಾರೆ. ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡುವುದು ಇನ್ನೂ ಖಚಿತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಲೆ ಏರಿಕೆ ವಿರುದ್ಧ, ಜಿಎಸ್‌ಟಿ ಹೆಚ್ಚಳ ವಿರುದ್ಧ ಕಾಂಗ್ರೆಸ್ ಪಕ್ಷ ಈಗಾಗಲೇ ಹೋರಾಟ ನಡೆಸುತ್ತಿದೆ. ಮುಂದುವರಿದ ಭಾಗವಾಗಿ ಪ್ರತಿ ಜಿಲ್ಲೆಯಲ್ಲಿ 75 ಕಿಮೀ ರ‍್ಯಾಲಿ ನಡೆಸಲು ಎಐಸಿಸಿ ಆದೇಶಿಸಿದೆ. ನಮ್ಮ ರಾಜ್ಯದಲ್ಲಿ ಪಕ್ಷದ ಕಾರ್ಯಕರ್ತರು ಜಿಲ್ಲೆಯಷ್ಟೇ ಅಲ್ಲ. ಪ್ರತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ 100 ಕಿಮೀ ನಡೆಸಲು ಉತ್ಸುಕರಾಗಿದ್ದಾರೆ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ