ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಟೌನ್ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ.
ಸಾಕ್ಷಾಧಾರಗಳ ಕೊರತೆಯಿಂದಾಗಿ ಉಡುಪಿ ಟೌನ್ ಪೊಲೀಸರು ಬಿ.ರಿಪೋರ್ಟ್ ಸಲ್ಲಿಕೆ ಹಾಕಿದ್ದು, ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಆದ್ರೆ, ಕೋರ್ಟ್ ಇನ್ನೂ ಉಡುಪಿ ಪೊಲೀಸರ ಬಿ.ರಿಪೋರ್ಟ್ ವರದಿಯನ್ನು ಅಂಗೀಕರಿಸಿಲ್ಲ.
ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಏಪ್ರಿಲ್ 12 ರಂದು ಉಡುಪಿಯ ಖಾಸಗಿ ಹೋಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಆದ್ರೆ, ಸಾವಿಗೆ ಮುನ್ನ ಸ್ನೇಹಿತರಿಗೆ ವಾಟ್ಸಪ್ ಸಂದೇಶ ಕಳಿಸಿದ್ದ ಸಂತೋಷ್, ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಈಶ್ವರಪ್ಪ ವಿರುದ್ಧ ಪ್ರತಿಭಟನೆ ಮಾಡಿದ್ದವು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಪ್ರತಿಪಕ್ಷಗಳು ಈಶ್ವರಪ್ಪ ವಿರುದ್ಧ ಪ್ರತಿಭಟನೆ ಮಾಡಿದ್ದವು. ಕೊನೆಗೆ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ