ಉಡುಪಿ : ಕಾರಿಗೆ ಹಿಂದಿನಿಂದ ಬಂದ ಕೋರಿಯರ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಾಯಗೊಂಡಿರುವ ಘಟನೆ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಕಾರಿಗೆ ಉದ್ಯಾವರ ಅಲೀಮ್ ಸಾಬ್ಜಿ ಆಡಿಟೋ
ರಿಯಂ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಕೋರಿಯರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರೊಳಗಿದ್ದ ನಾಲ್ವರು ಮಹಿಳೆಯರು ಮತ್ತು ಒಬ್ಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದಿಂದ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟನೆ ಉಂಟಾಗಿದ್ದು, ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಟ್ರಾಫಿಕ್ ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ