ಕಾರ್ಕಳ : ಕಾರ್ಕಳ ತಾಲೂಕು ಕಲ್ಯಾಗ್ರಾಮದ ಅರಕದಬೈಲು ಎಂಬಲ್ಲಿ ಹಳೆಕಟ್ಟೆ-ಕೈರಬೆಟ್ಟು ರಸ್ತೆಯಲ್ಲಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ.
ಪವನ್ ಕುಮಾರ್ ಎಂಬವರು ಕಲ್ಕಾರ್‌ನಿಂದ ಹಾಳೆಕಟ್ಟೆ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ, ಅರಕದಬೈಲು ಎಂಬಲ್ಲಿ ಎದುರಿನಿಂದ ಬರುತ್ತಿದ್ದ ರಾಘವೇಂದ್ರ ಎಂಬವರ ಬೈಕಿಗೆ ಡಿಕ್ಕಿ ಹೊಡೆದಿದ್ದಾರೆ.
ಪರಿಣಾಮ ರಾಘವೇಂದ್ರ ಬೈಕ್ ಸಹಿತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರು ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದ್ದು, ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ