ಶಿರೂರು: ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್ ಗೇಟ್ ನಲ್ಲಿ ಬುಧವಾರ ನಡೆದಿದೆ.
ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಒಬ್ಬರು ಮಹಿಳೆಯಾಗಿದ್ದು, ಇನ್ನಿಬ್ಬರು ಪುರುಷರೆಂದು ತಿಳಿದು ಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ