ಶಿರೂರು: ಟೋಲ್ ಪ್ಲಾಜಾದಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಟೋಲ್ ಸಿಬ್ಬಂದಿ ನೀಡಿದ ದೂರಿನಂತೆ ಆ್ಯಂಬುಲೆನ್ಸ್ ಚಾಲಕ ರೋಶನ್ ರೋಡ್ರಿಗಸ್ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 279, 338, 304ರ ಅಡಿ ಪ್ರಕರಣ ದಾಖಲಾಗಿದೆ.
ಟೋಲ್ ಪ್ಲಾಜಾದ ಕಂಬಕ್ಕೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟು 5ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡ ಐವರ ಪೈಕಿ ಆ್ಯಂಬುಲೆನ್ಸ್ ಚಾಲಕನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಇದೀಗ ಈತನ ವಿರುದ್ಧ ಪ್ರಕರಣ ದಾಖಲಾಗಿದೆ.
ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ಜು.20 ರಂದು ಚಿಕಿತ್ಸೆಗಾಗಿ ರೋಗಿಯೊಬ್ಬರನ್ನು ಕರೆತರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಆ್ಯಂಬುಲೆನ್ಸ್ ಚಾಲಕ 50ಕಿ.ಮೀ ದೂರವನ್ನು ಕೇವಲ 27ನಿಮಿಷಗಳಲ್ಲಿ ತಲುಪಿದ್ದು, ಚಾಲಕನ ಅತಿಯಾದ ವೇಗ, ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ