ಉಡುಪಿ: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಪೆರ್ಡೂರು ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ಜು.23ರಂದು ಬೆಳಗ್ಗೆ ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಹರಾವರಿ ನಿವಾಸಿ ವಿಜಯ ಕುಮಾರ್ ಎಸ್. (23), ನರಸಿಂಹ ರಾಜಪುರ ನಿವಾಸಿ ನಿಕ್ಷೇಪ್ ಎಸ್.ವಿ.(24) ಮತ್ತು ಕೊಪ್ಪ ಕುವೆಂಪು ನಗರದ ನಿತೇಶ್ ಕುಮಾರ್(22) ಬಂಧಿತ ಆರೋಪಿಗಳು.
ಇವರು ಆಗುಂಬೆ-ಹೆಬ್ರಿ ಕಡೆಯಿಂದ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಕುರಿತ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇವರ ವಶದಲ್ಲಿದ್ದ 6.09 ಲಕ್ಷ ರೂ. ಮೌಲ್ಯದ 20 ಕಿಲೋ 614 ಗ್ರಾಂ ತೂಕದ ಗಾಂಜಾ, 15 ಸಾವಿರ ರೂ. ಮೌಲ್ಯದ ಮೂರು ಮೊಬೈಲ್‌ಗಳು, 9 ಲಕ್ಷ ರೂ. ಮೌಲ್ಯದ ಕಾರು, 6ಸಾವಿರ ರೂ. ನಗದು ವಶವಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 15.30 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ನಿರ್ದೇಶನದಲ್ಲಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪ ಮಾರ್ಗದರ್ಶನದಲ್ಲಿ, ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣಾ ನಿರೀಕ್ಷಕ ಮಂಜುನಾಥ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ