ಕುಂದಾಪುರ: ಖಾಸಗಿ ಕಾಲೇಜೊಂದರ ಗಣಿತಶಾಸ್ತ್ರ ಉಪನ್ಯಾಸಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಕುಂದಾಪುರದ ಖಾಸಗಿ ಕಾಲೇಜಿನಲ್ಲಿ ಗಣಿತ ಶಾಸ್ತ್ರ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದ ನೆಲ್ಯಾಡಿ ಮೂಲದ ಆನಂದ(34) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕುಂದಾಪುರದ ಅಂಕದಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಆನಂದ್ ದಂಪತಿ ಶುಕ್ರವಾರ ತಡರಾತ್ರಿ ವರೆಗೆ ಪರೀಕ್ಷೆಗಾಗಿ ಪ್ರಶ್ನೆಪತ್ರಿಕೆ ತಯಾರು ಮಾಡಿ ಬಳಿಕ ಮಲಗಲು ತೆರಳಿದ್ದರು. ಅವರು ಶನಿವಾರ ಬೆಳಿಗ್ಗೆ ಅಡುಗೆಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
2 ತಿಂಗಳ ಹಿಂದೆ ಆನಂದ್ ಅದೇ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿಯೋರ್ವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆನಂದ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ