Slider

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್.ಐ.ಎ.ಗೆ ವಹಿಸಲು ನಿರ್ಧಾರ:-ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ 29-7-2022


 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದಂತ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಈ ಸಂಬಂಧ ಪೊಲೀಸರು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತಂತೆ ಮಹತ್ವದ ಚರ್ಚೆ ನಡೆಸಿದ ಬಳಿ, ಈ ನಿರ್ಧಾರಕ್ಕೆ ಬರಲಾಗಿದೆ.




ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಅಂತರರಾಜ್ಯದ ನಂಟು ಹೊಂದಿರುವ ಕಾರಣದಿಂದಾಗಿ, ಎನ್‌ಐಎ ತನಿಖೆಗೆ ವಹಿಸೋದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸೋರಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿದೆ.


 ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ತನಿಖೆಗೆ ವಹಿಸುವಂತೆ ಸಿಎಂ ಬೊಮ್ಮಾಯಿಗೆ ಪತ್ರದಲ್ಲಿ ಮನವಿ ಮಾಡಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಅದೇ ನಿರ್ಧಾರವನ್ನು ಕೈಗೊಂಡಿದೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo