Slider

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಕ್ಕೆ ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ29-7-2022

 


ಬೆಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಲಾಗುವುದು. ಕೇರಳ ಗಡಿ ಭಾಗದಲ್ಲಿ 55 ರಸ್ತೆಗಳನ್ನು ನಿಭಾಯಿಸುವುದು, ನಿರ್ಬಂಧ ಹೇರಿಕೆ ಸೇರಿದಂತೆ ಪ್ರಮುಖ ತೀರ್ಮಾನಗಳ ಬಗ್ಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.




ಪ್ರವೀಣ್ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತೊಂದು ಕೊಲೆಯ ಮಾಹಿತಿ ಬಂದಿದೆ. ಮೂರು ಕೊಲೆಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಪ್ರತಿಯೊಬ್ಬ ನಾಗರೀಕನ ಜೀವವೂ ಸರ್ಕಾರಕ್ಕೆ ಮುಖ್ಯ. ತನಿಖೆ ನಡೆಯುತ್ತಿದೆ. ಮೂರು ಕೊಲೆಗಳಾಗಿರುವುದು ಜನರಲ್ಲಿ ಆತಂಕವನ್ನು ಮೂಡಿಸಿರುವುದು ಸಹಜ. ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ನೀಡಲಾಗಿದೆ.ರಾಜಕೀಯ ಪ್ರೇರಣೆ ಕೂಡ ಇದರ ಹಿಂದಿದೆ. ಇದರಲ್ಲಿ ಹಲವು ಆಯಾಮಗಳಿವೆ. ಇವೆಲ್ಲಗಳನ್ನು ನಿಗ್ರಹಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.

ಮಸೂದ್ ಕೊಲೆಯ ಅರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಇನ್ನೆರಡು ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ. ಅದರ ಹಿಂದೆ ದೊಡ್ಡ ಸಂಘಟನೆಗಳಿವೆ. ಇದು ಕೇವಲ ಕೊಲೆ ಎಂದು ಪರಿಗಣಿಸಲಾಗುತ್ತಿಲ್ಲ. ಇದೊಂದು ಯೋಜನಾಬದ್ಧ ದುಷ್ಕøತ್ಯವಾಗಿದ್ದು, ಇದರ ಹಿಂದಿರುವ ಸಮಾಜಘಾತುಕ ಸಂಘಟನೆಗಳನ್ನು ಸದೆಬಡೆಯುವ ಮಹತ್ವದ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕ್ರಮಗಳು ಜನರಿಗೆ ವೇದ್ಯವಾಗಲಿದೆ ಎಂದರು.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo