ಉಡುಪಿ : ಕ್ಷುಲ್ಲಕ ಕಾರಣಕ್ಕೆ ಕುತ್ತಿಗೆ ಕೊಯ್ದು ಯುವಕ ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ನಂದನವನದಲ್ಲಿ ನೆಡೆದಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಯುವಕನನ್ನು ಪ್ರಸನ್ನ ಎಂದು ಗುರುತಿಸಲಾಗಿದ್ದು ಗಂಭೀರ ಗಾಯಗೊಂಡ ಪ್ರಸನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಕುವಿನಿಂದ ಕುತ್ತಿಗೆ ಕೊಯ್ದು ಹಲ್ಲೆ ನೆಡೆಸಿದ ಯುವಕ ಸುದರ್ಶನ ಎಂಬಾತ ಕ್ರತ್ಯವೆಸಗಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳದಲ್ಲಿ ಆರೋಪಿಯ ಶೋಧ ಕಾರ್ಯಕ್ಕೆ ಬೈಂದೂರು ಪಿ.ಎಸ್.ಐ ಪವನ್ ನಾಯಕ್ ನೇತ್ರತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು ಮನೋಜ ಖಾರ್ವಿ ನೀಡಿದ ದೂರಿನಂತೆ ಬೈಂದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ