ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಸೆಕ್ಷನ್ 144 ಜಾರಿ ಮಾಡಿ ಅಂಗಡಿ ಮಗ್ಗಟ್ಟುಗಳನ್ನು ಬಂದ್ ಮಾಡಲಾಗಿದೆ. ಇದೀಗ ಮುಂಜಾಗ್ರತಾ ಉಡುಪಿಯಲ್ಲೂ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.
ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಸೇರಿದಂತೆ ಜಿಲ್ಲೆಯಾದ್ಯಂತ ಹಲವು ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹೆಚ್ಚಿಸಲಾಗಿದೆ. ಹೊರ ರಾಜ್ಯ, ಹೊರ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳ ತಪಸಣೆ ಹಾಗೂ ಸಂಶಯಾಸ್ಪದ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಪ್ರಮುಖ ಜಂಕ್ಷನ್, ಸೂಕ್ಷ್ಮ ಪ್ರದೇಶಗಳಲ್ಲಿ ಪೋಲಿಸರಿಂದ ಬಿಗು ಬಂದೋಬಸ್ತ್ ಮಾಡಲಾಗಿದೆ. ಉದ್ಯಾವರದ ಬಲಾಯಿಪಾದೆ, ಅಂಬಾಗಿಲು, ನೇಜಾರು ಭಾಗಗಳಲ್ಲಿ ಪೋಲಿಸರಿಂದ ಬಿಗಿ ತಪಾಸಣೆ ನಡೆಯುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ