ಉಡುಪಿ: ಮಂಗಳೂರಿನಲ್ಲಿ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಬೆನ್ನಲ್ಲೇ, ಉಡುಪಿಯಲ್ಲಿ ಅಪರಿಚಿತ ಕಾರು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು ಬಂದಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಬಳಿಯಲ್ಲಿ ಅಪರಿಚಿತ ಕಾರು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಇನ್ನಾ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಹುಂಡೈ ಕಾರು ಪತ್ತೆಯಾಗಿದೆ.
ಸ್ಥಳೀಯರು ಅಪರಿಚಿತ ಕಾರು ಕಂಡೊಡನೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣಕ್ಕೂ, ಈ ಕಾರಿಗೂ ಸಂಬಂಧ ಇದ್ಯಾ ಎನ್ನುವ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ