ಕಾರವರ: ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿಯ ಸೇತುವೆ ಮೇಲಿನ ರಸ್ತೆಯಲ್ಲಿ ನಡೆದಿದೆ.
ಕೇರಳದಿಂದ ಭಟ್ಕಳ ಕಡೆ ಬರುತ್ತಿದ್ದ ಲಾರಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತ ಹಿನ್ನೆಲೆ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಇನ್ನು ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ