ಭಟ್ಕಳ:-ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೊಮ್ಮೆ ಭಟ್ಕಳದಲ್ಲಿ ದಾಳಿ ನಡೆಸಿದ್ದು, ಪಾಕಿಸ್ತಾನಿ ಗುಪ್ತಚರ ಪಡೆ ಐಎಸ್ಐ ನೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇಬ್ಬರನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಸ್ಥಳೀಯ ಗುಪ್ತಚರ ಪೊಲೀಸರ ನೆರವಿನಿಂದ ಬೆಳಿಗ್ಗೆ 4 ಗಂಟೆ ಸುಮಾರಿಗೆ ದಾಳಿ ನಡೆಸಿರುವ ಎನ್. ಐ.ಎ ನಗರ ವ್ಯಾಪ್ತಿಯ ಅಬ್ದುಲ್ ಮುಕ್ತದೀರ್ ಮತ್ತು ಆತನ ಸಹೋದರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಉಗ್ರ ಸಂಘಟನೆಯ ಬರಹಗಳ ಭಾಷಾಂತರಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆಯಾದರೂ ಇನ್ನಿತರ ವಿಷಯಗಳ ಕುರಿತು ತಿಳಿದು ಬರಬೇಕಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ