ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಮಸೂದ್, ಸುರತ್ಕಲ್ ನ ಫಾಝಿಲ್ ಮನೆಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ನಡೆದ ಹತ್ಯೆಗಳ ತನಿಖೆ ಚುರುಕುಗೊಂಡಿದೆ, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ವೇಗವಾಗಿ ಸಾಗಿದ್ದು, ಶೀಘ್ರವೇ ಹಂತಕರ ಪತ್ತೆಯಾಗಲಿದೆ ಎಂದರು.
ಪ್ರಕರಣವನ್ನು ಅನೌಪಚಾರಿಕವಾಗಿ ಎನ್‌ಐಎಗೆ ವಹಿಸಲಾಗಿದೆ. ಅಧಿಕಾರಿಗಳು ಕೇರಳ, ಮಂಗಳೂರಿನಲ್ಲಿ ಮಾಹಿತಿ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದರು.
ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿದ್ದ ಸಿಎಂ ಮಸೂದ್ ಹಾಗೂ ಫಾಝೀಲ್ ಮನೆಗೆ ಭೇಟಿ ನೀಡದಿರುವ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿತ್ತು. ಈ ಬೆನ್ನಲ್ಲೇ ಸಿಎಂ ಸ್ಪಷ್ಟನೆ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ