ಸರಕಾರ ಬೇಕೋ ಹಿಂದುತ್ವ ಬೇಕೋ ಕೇಳಿದಾಗ ನಾವು ಸರಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡುತ್ತೇವೆ. ನಾವು ಇವತ್ತು ಹಿಂದುತ್ವವನ್ನೇ ಆಧಾರವಾಗಿ ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಕೊಲೆಯಾದ ಮಸೂದ್ ಮತ್ತು ಫಾಝಿಲ್ ಎಂಬವರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡದಿರುವ ಕುರಿತು ಎದ್ದಿರುವ ವ್ಯಾಪಕ ಆಕ್ರೋಶದ ಮಾಧ್ಯಮದವರು ಗಮನಸೆಳೆದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು.
ಈ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ನಾನು ಸ್ಪಷ್ಟನೆ ಕೊಡಬೇಕಾದ ಅಗತ್ಯವಿಲ್ಲ. ಹಿಂದೂ ಮತ್ತು ಅಧಿಕಾರ ಎಂಬ ವಿಚಾರ ಬಂದಾಗ ನಾವು ಹಿಂದುತ್ವ ಆಯ್ಕೆ ಮಾಡುತ್ತೇವೆ. ಇದೇ ಕಾರಣಕ್ಕೆ ನಾವು ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿರುವುದು ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ