ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ.
ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ.
ಮೂಲತಃ ಸುಳ್ಯ ಮೂಲದ ಅಲ್ತಾಫ್ ಹಾಗೂ ಇರ್ಪಾನ್ ಸಾಕಷ್ಟು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಪ್ರವೀಣ್ ಹತ್ಯೆ ದಿನ ಆರೋಪಿಗಳು ಬೆಳ್ಳಾರೆಯಲ್ಲಿಯೇ ಇದ್ದು, ಬಳಿಕ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದರು. ಬೆಳ್ಳಾರೆಯಲ್ಲಿ ಬಂಧನವಾಗಿದ್ದ ಆರೋಪಿಗಳಾದ ಶಫೀಕ್ ಹಾಗೂ ಝಾಕೀರ್ ಮಾಹಿತಿ ಮೇರೆಗೆ ಇವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ