ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶವುಳ್ಳ ಆಹಾರ ನೀಡಬೇಕೆಂಬ ಕಾರಣಕ್ಕೆ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮೊಟ್ಟೆಯನ್ನು ನೀಡುತ್ತಿದೆ. ಇದೀಗ ಮುದ್ದೆ ಹಾಗೂ ಜೋಳದ ರೊಟ್ಟಿಯನ್ನು ಸಹ ಸೇರ್ಪಡೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರ ಸರ್ಕಾರವು ಸಹ ಅನುದಾನ ನೀಡುತ್ತಿರುವುದರಿಂದ ಈ ಕುರಿತು ಅನುಮತಿ ಕೇಳಿ ಪತ್ರ ಬರೆಯಲಾಗಿದೆ ಎಂದು ಮೂಲಗಳು ಹೇಳಿದ್ದು, ಅನುಮತಿ ದೊರೆತ ಬಳಿಕ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ನೀಡಲಾಗುತ್ತದೆ.
ಉತ್ತರ ಕರ್ನಾಟಕದ ಮಕ್ಕಳಿಗೆ ಜೋಳದ ರೊಟ್ಟಿ ಹಾಗೂ ದಕ್ಷಿಣ ಕರ್ನಾಟಕ ಭಾಗದ ಮಕ್ಕಳಿಗೆ ಮುದ್ದೆ ನೀಡುವ ಕುರಿತು ಚಿಂತನೆ ನಡೆಸಲಾಗಿದ್ದು, ಇದು ಅನುಷ್ಠಾನಕ್ಕೆ ಬಂದರೆ ರೈತರಿಂದ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಿರುವ ಲಕ್ಷಾಂತರ ಮೆಟ್ರಿಕ್ ಟನ್ ಜೋಳ ಮತ್ತು ರಾಗಿ ಸಹ ಸದುಪಯೋಗವಾದಂತಾಗುತ್ತದೆ ಎಂಬ ಆಲೋಚನೆಯೂ ಈ ಯೋಜನೆ ಹಿಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ