Slider

ಡಿ.16ರಿಂದ 18ರವರೆಗೆ ಆಳ್ವಾಸ್ ನುಡಿಸಿರಿ: ಡಾ.ಮೋಹನ ಆಳ್ವ1-8-2022

 


ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು- ನುಡಿ- ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಯು ಡಿಸೆಂಬರ್‌ 16, 17 ಮತ್ತು 18ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿಯ ಆವರಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.




‘2004ರಿಂದ ಆರಂಭಗೊಂಡ ಆಳ್ವಾಸ್ ನುಡಿಸಿರಿ ಸಮ್ಮೇಳನವನ್ನು ಕಳೆದ ಮೂರು ವರ್ಷಗಳಿಂದ ಕೋವಿಡ್ ಮತ್ತು ಅಕಾಲಿಕ ನೆರೆಯ ಕಾರಣಕ್ಕೆ ಸ್ಥಗಿತ ಮಾಡಲಾಗಿತ್ತು. ಕನ್ನಡಾಭಿಮಾನಿಗಳ ಒತ್ತಾಸೆಯಿಂದ ಈ ವರ್ಷದಿಂದ ಮತ್ತೆ ಪುನರಾರಂಭಗೊಂಡಿದ್ದು, ಮೂರು ದಿನಗಳು ನಡೆಯುವ ಈ ಸಮ್ಮೇಳನವು ಸಂಭ್ರಮದ ವಾತಾವರಣವನ್ನು ಕಲ್ಪಿಸಲಿದೆ. ಈ ನಿಟ್ಟಿನಲ್ಲಿ ಸಂಸ್ಥೆ ಈಗಾಗಲೇ ಕಾರ್ಯಪ್ರವೃತರಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ ಆಳ್ವಾಸ್ ನುಡಿಸಿರಿ 2022ನ್ನು ಯಶಸ್ವಿಗೊಳಿಸಬೇಕು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.




 

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo