ಭಾರೀ ಸಂಚಲನ ಮೂಡಿಸಿದ್ದ, ಸುರತ್ಕಲ್ ನಲ್ಲಿ 'ಮೊಹಮ್ಮದ್ ಫಾಝಿಲ್' ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಬಂಧಿತರನ್ನು ಸುಹಾಸ್ (29), ಮೋಹನ್ (26) ಗಿರಿಧರ್ (23 ), ಅಭಿಷೇಕ್ (23 )ದೀಕ್ಷಿತ್ (23),ಶ್ರೀನಿವಾಸ್ (21) ಎಂದು ಗುರುತಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ