ಮಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.
ಮಂಗಳೂರಿನ ಸುರತ್ಕಲ್ ನಲ್ಲಿ ಮಂಕಿ ಕ್ಯಾಪ್ ಧರಿಸಿ ಮೊಹಮ್ಮದ್ ಫಾಜಿಲ್ ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದ ಕಾರು ಚಾಲಕ ಮತ್ತು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರಿಗೆ ಕಾರು ಪತ್ತೆಯಾದ ಬಳಿಕ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇಂದು ಕೋರ್ಟ್ ಗೆ ಹಾಜರುಪಡಿಸಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ