ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಇತರೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.
ಈ ಕುರಿತು ವಿಚಾರಣೆ ನಡೆಸಿದ್ದ ದೆಹಲಿಯ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಈ ಆದೇಶವನ್ನು ಕೋರ್ಟ್ ಪ್ರಕಟಿಸಲಿದೆ.
ಈ ಹಿನ್ನೆಲೆಯಲ್ಲಿ ದೆಹಲಿಗೆ ಡಿ.ಕೆ ಶಿವಕುಮಾರ್ ತೆರಳಿದ್ದಾರೆ. ತೀರ್ಪಿನ ಬಳಿಕ ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ಇರುವುದರಿಂದ ಇಂದೇ ಹುಬ್ಬಳ್ಳಿಗೆ ಡಿಕೆಶಿ ವಾಪಸ್ಸಾಗಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ