ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಮಕ್ಕಿಮನೆ ಅಂಗಡಿ ಎಂಬಲ್ಲಿ ಆ .7 ರಂದು ಮಧ್ಯಾಹ್ನ ನಡೆದಿದೆ .
ಮೃತರನ್ನು ಮಕ್ಕಿಮನೆ ಅಂಗಡಿ ನಿವಾಸಿ 21 ವರ್ಷ ಪ್ರಾಯದ ಚೇತನ ಮೃತದುರ್ದೈವಿ . ಇವರು ಅಂಗವಿಕಲರಾಗಿದ್ದು , ನಿನ್ನೆ ಮಧ್ಯಾಹ್ನ ಊಟ ಮಾಡಿದ ಬಳಿಕ ಹಠಾತ್ ಆಗಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದರು . ಕೂಡಲೇ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು . ಅಲ್ಲಿ ಪರೀಕ್ಷಿಸಿದ ವೈದ್ಯರು ಚೇತನ್ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ . ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ