ವ್ಯಕ್ತಿಯೋರ್ವ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಉಚ್ಚಿಲ ನಿವಾಸಿ ಕಿಶೋರ್ ವದಂತಿ ಹಬ್ಬಿಸಿದ ವ್ಯಕ್ತಿಯಾಗಿದ್ದು, ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಬೆನ್ನಟ್ಟಿ ತಲವಾರು ದಾಳಿ ಯತ್ನ ನಡೆದಿದೆ ಎಂದು ವದಂತಿ ಹಬ್ಬಿಸಿದ್ದ. ಈ ಬಗ್ಗೆ ಆತನನ್ನು ಪೊಲೀಸರು ವಿಚಾರಣೆ ನಡೆಸಿದಾಗ ಅಂತಹ ಯಾವುದೇ ಘಟನೆ ನಡೆದಿಲ್ಲ, ಆತ ಸುಮ್ಮನೆ ಹೇಳಿರುವುದು ಬೆಳಕಿಗೆ ಬಂದಿದೆ ಎಂದು ಉಳ್ಳಾಲ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ‘ತಲವಾರು ದಾಳಿ ಯತ್ನದಂತಹ ಯಾವುದೇ ಘಟನೆ ನಡೆದಿಲ್ಲ. ಸ್ಥಳಕ್ಕೆ ತಾನು ಭೇಟಿ ನೀಡಿ ವದಂತಿ ಹಬ್ಬಿಸಿದ ವ್ಯಕ್ತಿಯನ್ನು ವಿಚಾರಿಸಿದಾಗ, ತಾನು ಹಾಗೆ ಭಾವಿಸಿದ್ದಾಗಿಯೂ ಯಾರೂ ತನ್ನ ಮೇಲೆ ತಲವಾರು ದಾಳಿ ಮಾಡಿಲ್ಲ, ಬೆನ್ನಟ್ಟಿ ಬಂದಿಲ್ಲ ಎಂದು ಆತ ಒಪ್ಪಿಕೊಂಡಿದ್ದಾನೆ. ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ