ಸ್ವಾತಂತ್ರ್ಯ ದಿನಾಚರಣೆ ಮುನ್ನ ಕೆಲವು ಸಮಾಜಘಾತುಕ ಶಕ್ತಿಗಳು ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದ್ದು, ಕರ್ನಾಟಕ ಇದರತ್ತ ಹೆಚ್ಚಿನ ನಿಗಾ ವಹಿಸಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.
ಮಂಗಳೂರು, ಉಡುಪಿ, ಕಾರವಾರ (ಭಟ್ಕಳ), ಮಡಿಕೇರಿ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಮತ್ತಿತರ ಕಡೆ ಹೆಚ್ಚಿನ ಭದ್ರತೆ ಕೈಗೊಳ್ಳುವ ಅಗತ್ಯ ಇದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಕೆಲ ಸಮಾಜಘಾತುಕ ಶಕ್ತಿಗಳು ಸ್ವಾತಂತ್ರ್ಯ ದಿನಾಚರಣೆ ಮುನ್ನ ವಿಧ್ವಂಸಕ ಕೃತ್ಯಕ್ಕೆ ಹೊಂಚು ಹಾಕಿವೆ. ಹಾಗಾಗಿ ಶಂಕಿತ ವ್ಯಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಬೇಕು. ಗುಪ್ತಚರ ವಿಭಾಗ, ಆಂತರಿಕ ಭದ್ರತೆಯನ್ನು ಇನ್ನಷ್ಟು ಚುರುಕುಗೊಳಿಸುವಂತೆ ಕೇಂದ್ರ ಗುಪ್ತಚರ ವಿಭಾಗವು ಗೃಹ ಇಲಾಖೆಗೆ ಸೂಚನೆ ಕೊಟ್ಟಿದೆ.
ಇತ್ತೀಚೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಐಸಿಸ್ ಉಗ್ರ ಸಂಘಟನೆಗಳ ಪರ ಒಲವು ಹೊಂದಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಬಂಧಿಸಿದ್ದ ಕಾಶ್ಮೀರದ ಉಗ್ರ ಹಾಗೂ ಕಳೆದ ವಾರವಷ್ಟೇ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಅಲ್ಲದೆ, ಅನೇಕ ಗಲಭೆಗಳು ನಡೆಯುತ್ತಿದ್ದು, ಇದನ್ನೆಲ್ಲಾ ನಿಯಂತ್ರಿಸುವ ಅಗತ್ಯ ಇದೆ. ಇನ್ನು ವಿಶೇಷವಾಗಿ ಯುಎಇ ಹಾಗೂ ಆಫ್ರಿಕಾ ರಾಷ್ಟ್ರಗಳಿಂದ ಆಗಮಿಸುವ ಪ್ರಜೆಗಳ ಮೇಲೆ ಕಣ್ಣಿಡಬೇಕು. ವಿಮಾನ ನಿಲ್ದಾಣದಲ್ಲಿ ಬರುವ ಪ್ರತಿಯೊಬ್ಬ ಪ್ರಯಾಣಿಕರ ಮಾಹಿತಿಯನ್ನು ಕಲೆ ಹಾಕಬೇಕು. ಅವರು ಯಾವ ಕಾರಣಕ್ಕಾಗಿ ಬಂದಿದ್ದಾರೆ, ಎಲ್ಲಿ ವಾಸ್ತವ್ಯ ಹೂಡಲಿದ್ದಾರೆರೆ. ಕರ್ತವ್ಯ ನಿರ್ವಹಿಸುವ ಸ್ಥಳ ಸೇರಿದಂತೆ ಪೂರ್ಣ ಮಾಹಿತಿ ಕಲೆ ಹಾಕುವಂತೆ ಸೂಚಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ