ರಾಜ್ಯ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಸಿ.ಎಂ.ಇಬ್ರಾಹಿಂ ಅವರ ರಾಜಿನಾಮೆಯಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆಯಬೇಕಾಗಿದ್ದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಯಾದ ಶ್ರೀಮತಿ ವಿಶಾಲಾಕ್ಷಿ ಅವರು ಪ್ರಕಟಿಸಿದ್ದಾರೆ.
ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್ ನ ಒಂದು ಸ್ಥಾನಕ್ಕೆ ದಿನಾಂಕ: 11-08-2022ರಂದು ಚುನಾವಣೆಯನ್ನು ನಿಗಧಿಪಡಿಸಿ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.
ಪರಿಷತ್ ನ ಒಂದು ಸ್ಥಾನಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಾಸ್ ತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಕಣದಲ್ಲಿ ಯಾರು ಇಲ್ಲದ ಕಾರಣ ಏಕೈಕ ಅಭ್ಯರ್ಥಿಯಾಗಿದ್ದ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ