ಮೇಯಲು ಹೋದ ಜಾನುವಾರುಗಳಿಗೆ ವಿದ್ಯುತ್ ಶಾಕ್ ಆಗಿ ನಾಲ್ಕು ಜಾನುವಾರುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೈಂದೂರು ತಾಲೂಕು ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಬಳಿ ನಡೆದಿದೆ.
ಗಾಳಿ ಮಳೆ ಹಿನ್ನಲೆಯಲ್ಲಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದ ಹಸುಗಳು ಮೃತಪಟ್ಟಿದೆ.
ಹಳೆ ವಿದ್ಯುತ್ ತಂತಿ ದುರಸ್ತಿಗೆ ಅನೇಕ ಬಾರಿ ಸ್ಥಳೀಯರು ಮನವಿ ಮಾಡಿದ್ದರೂ ಕೂಡಾ ದುರಸ್ತಿ ಮಾಡದೇ ನಿರ್ಲಕ್ಷ್ಯ ತೋರಿದ್ದ ಕೆಇಬಿ ಅಧಿಕಾರಿಗಳ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ