Slider

ರಾಜ್ಯದಾದ್ಯಂತ ಮುಂದಿನ 48 ಗಂಟೆಗಳ ಕಾಲ ಮಳೆ ಸಾಧ್ಯತೆ : ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಕೆ 01.08.2022

 ಬೆಂಗಳೂರು: ರಾಜ್ಯಾದ್ಯಂತ ಎರಡು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವೇಳೆ ಬಿರುಗಾಳಿ ಬೀಸುವ ಸಾಧ್ಯತೆ ಕೂಡ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.




ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿರುವ ಹಿನ್ನೆಲೆ, ಮುಂದಿನ 48ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನಲಾಗಿದೆ. ಆಗಸ್ಟ್ 2 ರವರೆಗೂ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಮಳೆಯೊಂದಿಗೆ ಬಿರುಗಾಳಿಯೂ ಬೀಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo